Published
5 months agoon
By
Akkare Newsಮತ್ಸ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ.
ಬೈರಾಪುರ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಪ್ರವಾಹದ ಜತೆಗೆ ಭಾರಿ ಗಾತ್ರದ ಮರಗಳೂ ಬರುತ್ತಿದ್ದು, ಶಿಶಿಲದ ಕಿಂಡಿ ಅಣೆಕಟ್ಟೆಯಲ್ಲಿ ಸಿಕ್ಕಿಹಾಕಿಕೊಂಡಿವೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಒಳಗೆ ನುಗ್ಗಿದೆ
ದೇವಸ್ಥಾನದ ಪರಿಸರದಲ್ಲಿ ಹಲವು ಮನೆಗಳಿದ್ದು, ದೇವಸ್ಥಾನದ ಅಂಗಳದವರೆಗೆ ನೀರು ಬಂದಿರುವುದರಿಂದ ಅವರು ಭಯಗೊಂಡಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿ ಅಣೆಕಟ್ಟೆಯಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿದೆ. ಶಿಶಿಲ ಪೇಟೆಗೆ ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ಮನೆಗಳಿಗೆ ತೆರಳಬೇಕಾಗಿದೆ.