Published
5 months agoon
By
Akkare Newsಮಂಗಳೂರು/ಹಾಸನ/ಬೆಂಗಳೂರು : ಜು. 20 : ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಬ್ರಿಜೇಶ್ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನೆ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.
ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ನಿಂದ ಮಂಗಳೂರು ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಿಂದ ಯಶವಂತಪುರ ಜಂಕ್ಷನ್ ರೈಲು ಸಂಖ್ಯೆ 06548 ತಲಾ ಒಂದು ಟ್ರಿಪ್ ನಂತೆ ಸಂಚರಿಸಲಿದೆ.