Published
5 months agoon
By
Akkare Newsಜೂ.20 : ಬೆಂಗಳೂರಿನ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಡಿಕೆ ಶಿವಕುಮಾರ್
ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕಿದ್ದು, ಇದಕ್ಕಾಗಿ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆಗಳು ಯಾವಾಗ ಬೇಕಾದರೂ ನಡೆಯಬಹುದು.
ಅದರ ಸಿದ್ಧತೆ ಮೇಲೆ ಹೆಚ್ಚು ಶ್ರಮವಹಿಸಲು ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು.
ಒಂದು ವೇಳೆ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗದೆ ಇದ್ದರೆ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಕರೆ ನೀಡಿದರು