Published
5 months agoon
By
Akkare Newsಮಾನ್ಯರೇ,
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಮಂಗಳವಾರ (ದಿನಾಂಕ: 23-07-2024) ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸದ್ರಿ ಪ್ರತಿಭಟನೆಗೆ ದ.ಕ.ಜಿಲ್ಲೆಯ ಕೆಪಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳು ಮತ್ತು ಬ್ಲಾಕ್ ಮುಂಚೂಣಿ ಅಧ್ಯಕ್ಷರುಗಳು, ಕೆಪಿಸಿಸಿ ಸದಸ್ಯರು, ವಿವಿಧ ನಿಗಮಗಳಿಂದ ನಾಮನಿರ್ದೇಶನಗೊಂಡ ಎಲ್ಲಾ ಅಧ್ಯಕ್ಷರು-ಸದಸ್ಯರುಗಳು ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರುಗಳು, ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕೆಂದು ಗೌರವಾನ್ವಿತ ಮುಖ್ಯಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ಗೌರವಾನ್ವಿತ ಉಪಮುಖ್ಯಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರು ಸೂಚಿಸಿರುತ್ತಾರೆ.
ಆದುದರಿಂದ ಸಂಬಂಧಿಸಿದರವರು ತಪ್ಪದೇ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಈ ಮೂಲಕ ತಮ್ಮಲ್ಲಿ ಕೋರಿದೆ.
-ಕೆ.ಹರೀಶ್ ಕುಮಾರ್
(ಅಧ್ಯಕ್ಷರು, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ)