ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕುಮ್ಕಿ ಜಮೀನು ಮಂಜೂರಾತಿ ಕೈ ಬಿಟ್ಟ ಸರಕಾರ.ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಮನೆಗಳ ತೆರವೂ ಕೂಡ ಇಲ್ಲ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Published

on

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

 

ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್‌ ಕುಮಾರ್‌ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವರು “ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬುದೇ ಸತ್ಯ” ಎಂದರು.

“ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು” ಎಂಬ ಮಾಹಿತಿಯನ್ನು ಸಚಿವರು ಸದನಕ್ಕೆ ತಿಳಿಸಿದರು.

ಮುಂದುವರೆದು, “ಕೆಎಲ್‌ಆರ್‌ ಆಕ್ಟ್‌ ರೂಲ್‌ 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ? ಎಂಬ ಬಗ್ಗೆ ಗಂಭೀರವಾಗಿ ಪರಿಶೀಲಿಸಲಾಗುವುದು” ಎಂದರು.

 

ಬಡವರ ಮನೆ ತೆರವು ಸಾಧ್ಯವಿಲ್ಲ

ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ ವಿಚಾರವನ್ನೂ ಸಚಿವ ಕೃಷ್ಣ ಬೈರೇಗೌಡ ಅವರು ಸದನದ ಗಮನಕ್ಕೆ ತಂದರು.

ಈ ಮಾತನಾಡಿದ ಸಚಿವರು, “ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್‌ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಬಡವರ ಮನೆಯನ್ನೂ ತೆರವುಗೊಳಿಸಲಾಗದು. ಹಾಗಾಗಿ ಕಾನೂನಾತ್ಮಕವಾಗಿ ಸಕಾರಾತ್ಮಕವಾಗಿ ಮಾಡಬಹುದಾ? ಎಂದು ಪ್ರಾಮಾಣಿಕವಾಗಿ ವಿಚಾರ ಮಾಡುವೆ ಎಂದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement