Published
5 months agoon
By
Akkare Newsಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೂ ಮೊದಲು ಫೆಬ್ರವರಿ 1 ರಂದು ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಅವರು ಯಾವುದೇ ಪ್ರಮುಖ ಬದಲಾವಣೆಗಳನ್ನು ಘೋಷಿಸಿರಲಿಲ್ಲ.
ಹಿಂದಿನ ವರ್ಷದ ಬಜೆಟ್ ಅಧಿವೇಶನದಲ್ಲಿ, ಟಿವಿ, ಸ್ಮಾರ್ಟ್‌ಫೋನ್‌ಗಳು, ಸೀಗಡಿ ಫೀಡ್ ಮೊದಲಾದ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಲಾಯಿತು. ಸಿಗರೇಟ್, ವಿಮಾನ ಪ್ರಯಾಣ ಮತ್ತು ಜವಳಿಗಳ ವೆಚ್ಚವನ್ನು ಹೆಚ್ಚಿಸಲಾಗಿತ್ತು.
ಈ ಬಾರಿ ಬಜೆಟ್ ನಲ್ಲಿ ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು. ಅದೇ ವೇಳೆ ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಮೊಬೈಲ್ ಹಾಗೂ ಚಾರ್ಜರ್ಗಳ ಮೇಲಿನ ತೆರಿಗೆ ಇಳಿಕೆ ಬಗ್ಗೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.
.
ಅಗ್ಗ ಯಾವುದು?
ಮೊಬೈಲ್ ಫೋನ್, ಮೊಬೈಲ್ ಚಾರ್ಜರ್, ಮೊಬೈಲ್ ಬಿಡಿಭಾಗಗಳು
ಕ್ಯಾನ್ಸರ್ ಔಷಧಗಳು
ಸಮುದ್ರಾಹಾರ
ಚಿನ್ನ ಮತ್ತು ಬೆಳ್ಳಿ
ಪಾದರಕ್ಷೆ
ಪ್ಲಾಟಿನಂ
ಪೆಟ್ರೋಕೆಮಿಕಲ್
ಚರ್ಮದ ವಸ್ತುಗಳು
ಎಕ್ಷರೆ ಮೆಷಿನ್
ಫೆರೋ ನಿಕ್ಕೆಲ್,
ಬ್ಲಿಸ್ಟರ್ ಕಾಪರ್
ಯಾವುದು ದುಬಾರಿ?
ಜೈವಿಕವಾಗಿ ವಿಘಟನೀಯವಲ್ಲದ ಪ್ಲಾಸ್ಟಿಕ್‌ಗಳು
ದೂರಸಂಪರ್ಕ ಸಲಕರಣೆ
ಅಮೋನಿಯಂ ನೈಟ್ರೇಟ್
PVC ಫ್ಲೆಕ್ಸ್ ಬ್ಯಾನರ್‌ಗಳು
ಸೋಲಾರ್ ಗ್ಲಾಸ್
ಉದ್ಯೋಗಸ್ಥ ನಾರಿಯರಿಗೆ ಉತ್ತೇಜನ; ಮಹಿಳೆಯರು, ಬಾಲಕಿಯರಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣ ಮೀಸಲು
ತಮ್ಮ ಬಜೆಟ್‌ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್‌ನಲ್ಲಿ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.
2024-25ರ ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ 3 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್‌ಗಳನ್ನು ನಿರ್ಮಿಸಲಿದೆ ಎಂದು ಹೇಳಿದರು.
“ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ವರ್ಕಿಂಗ್ ವುಮನ್ ಹಾಸ್ಟೆಲ್‌ಗಳನ್ನು ಸ್ಥಾಪಿಸುತ್ತದೆ” ಎಂದು ಹಣಕಾಸು ಸಚಿವರು ಘೋಷಿಸಿದರು. ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್ ಕೇಂದ್ರೀಕರಿಸುತ್ತದೆ. “ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿರುವಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸಬೇಕಾಗಿದೆ”. ಹಾಗೇ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ದೊಡ್ಡ ಕೃಷಿ ಉತ್ತೇಜನದಲ್ಲಿ ಘೋಷಿಸಿದರು. ಮುಂದಿನ 2 ವರ್ಷಗಳಲ್ಲಿ ಒಂದು ಕೋಟಿ ರೈತರನ್ನು ನೈಸರ್ಗಿಕ ಕೃಷಿಗೆ ಪ್ರಾರಂಭಿಸಲಾಗುವುದು. ಉತ್ಪಾದನೆಯನ್ನು ಹೆಚ್ಚಿಸಲು ದೊಡ್ಡ ಪ್ರಮಾಣದ ತರಕಾರಿ ಉತ್ಪಾದನಾ ಕ್ಲಸ್ಟರ್‌ಗಳನ್ನು ಉತ್ತೇಜಿಸಲಾಗುವುದು. ರಾಜ್ಯಗಳ ಸಹಭಾಗಿತ್ವದಲ್ಲಿ ಸರ್ಕಾರವು ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.
ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್, ಕೃಷಿ ಕ್ಷೇತ್ರಕ್ಕೆ ಮೋದಿ ನೀಡಿದ ಅನುದಾನ ಎಷ್ಟು?
ಕೃಷಿ ಕ್ಷೇತ್ರಕ್ಕೆ ಮೋದಿ ಸರ್ಕಾರ ನೀಡಿದ ಅನುದಾನ ಹಾಗೂ ಯೋಜನೆಗಳೇನು. ಈ ಬಾರಿ ರೈತರಿಗೆ ವಿಶೇಷವಾಗಿ ನೀಡಿದ್ದೇನು ಇಲ್ಲಿದೆ ನೋಡಿ.
ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಇದರಲ್ಲೂ ವಿಶೇಷವಾಗಿ ಕೃಷಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ರೈತರ ಮುಖದಲ್ಲಿ ಮಂದಾಸ ಮೂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒಟ್ಟು 1.52 ಲಕ್ಷ ಕೋಟಿ ರೂಪಾಯಿ ಮೀಸಲು ಇಡಲಾಗಿದೆ.
5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ನಿರ್ಧಾರವನ್ನು ಈ ಬಜೆಟ್‌ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ.
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದ್ದಾರೆ. ಹಾಗೂ ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ, ಮಾರುಕಟ್ಟೆಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.
ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್ ಬಲಗೊಳಿಸಲಾಗುತ್ತಿದೆ. ಹಾಗೂ ರೈತರ ಅನುಕೂಲಕ್ಕಾಗಿ ಡಿಜಿಟಲ್ ಬೆಳೆ ಸಮೀಕ್ಷೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕೃಷಿ ಉತ್ಪಾದನೆಯಲ್ಲಿ ಹೆಚ್ಚನ ನಮ್ಮ ಗುರಿಯಾಗಿರುವ ಕಾರಣ ನಮ್ಮ ಸರ್ಕಾರ ಈ ಬಾರಿ ರೈತರಿಗೆ ಹೆಚ್ಚು ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.
ಹೊಸದಾಗಿ ಉದ್ಯೋಗಕ್ಕೆ ಸೇರುವ ಯುವಕರಿಗೆ ಸರ್ಕಾರವೇ ನೀಡಲಿದೆ ಮೊದಲ 1 ತಿಂಗಳ ಪಿಎಫ್
ಹೊಸದಾಗಿ ಉದ್ಯೋಗಕ್ಕೆ ಸೇರುವ 30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್ ಅನ್ನು ಸರ್ಕಾರ ನೀಡಲಿದೆ ಎನ್ನುವ ಮಾಹಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರವು ಬಂಪರ್ ಕೊಡುಗೆಯನ್ನು ಘೋಷಿಸಿದೆ.
ಮೊದಲ ಬಾರಿಗೆ ಸಂಘಟಿತ ವಲಯದಲ್ಲಿ ಉದ್ಯೋಗವನ್ನು ಪ್ರಾರಂಭಿಸುವವರಿಗೆ ಒಂದು ಪಿಎಫ್ ಅನ್ನು ನೀಡಲಾಗುವುದು. ಈ ವೇತನವನ್ನು ಡಿಬಿಟಿ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯು ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಸಹಾಯವನ್ನು ಪಡೆಯಲಿದ್ದಾರೆ.
ಇಪಿಎಫ್‌ಒನಲ್ಲಿ ನೋಂದಾಯಿಸಿದ ಜನರಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಸರ್ಕಾರವು ಉದ್ಯೋಗಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ಪ್ರಾರಂಭಿಸುತ್ತದೆ ಎಂದು ಹಣಕಾಸು ಸಚಿವರು ಹೇಳಿದರು. ಒಂದು ತಿಂಗಳ ಪಿಎಫ್ (ಭವಿಷ್ಯ ನಿಧಿ) ಕೊಡುಗೆ ನೀಡುವುದರಿಂದ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು.