Published
5 months agoon
By
Akkare Newsಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.
ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು.
ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ.
ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.