Published
5 months agoon
By
Akkare Newsಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ದಿನಾಂಕ 27-07-2024 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ.
ವೇದಿಕೆಯಲ್ಲಿ ಪ್ರೊ.ವಿ.ಬಿ.ಅರ್ತಿಕಜೆ ಗೌರವ ಸಲಹೆಗಾರರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಮತ್ತು ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರು ಇವರನ್ನು ಡಾ. ಯು.ಪಿ. ಶಿವಾನಂದ ಆಡಳಿತ ನಿರ್ದೇಶಕರು ಸುದ್ದಿ ಸಮೂಹ ಸಂಸ್ಥೆ ಪುತ್ತೂರು ಇವರು ಸನ್ಮಾನಿಸಲಿದ್ದಾರೆ.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜುಬಿನ್ ಮೊಹಪಾತ್ರ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ತಾರನಾಥ ಗಟ್ಟಿ ಕಾಪಿಕಾಡು ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಮುರಳೀಕೃಷ್ಣ ಕೆ.ಎನ್ ಸಂಚಾಲಕರು, ವಿವೇಕಾನಂದ ಮಹಾವಿದ್ಯಾಲಯ ನೆಹರೂನಗರ ಪುತ್ತೂರು. ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಮುಖ್ಯಸ್ಥರು, ಕಹಳೆ ನ್ಯೂಸ್ ಚಾನೆಲ್ ಪುತ್ತೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.