Published
5 months agoon
By
Akkare Newsಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗು ಅನರ್ಘ್ಯ ಉಜಿರೆಯಿಂದ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯ ಬೊಲೆರೋ ಹಿಂದಿನಿಂದ ಢಿಕ್ಕಿ ಹೊಡೆದಿದೆ ಬಳಿಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿತ್ತು.
ಅನರ್ಘ್ಯ (9) ಗಂಭೀರ ಗಾಯಗೊಂಡಿದ್ದಳು ತಂದೆಗೆ ಗಾಯವಾಗಿದೆ. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದು, ಬಳಿಕ ಮೃಪಟ್ಟಿರುವುದಾಗಿ ತಿಳಿದುಬಂದಿದೆ.
ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ.
ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ ಬೊಲೆರೋ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.