ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.31ರಂದು ರಜೆ

Published

on

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 31-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಗಳಿಗೆ ದಿನಾಂಕ: 31-07-2024 ರಂದು ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ತಗ್ಗು ಪ್ರದೇಶದಲ್ಲಿ ನೆರೆ ಭೀತಿ-ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
ಉಳಿದಂತೆ ದುರ್ಬಲ ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ಪಾಠ ಪ್ರವಚನ ನಡೆಸದಂತೆ ತಿಳಿಸಲಾಗಿದ್ದು, ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳದಂತೆ ಸೂಚಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಗಳ ಯಾವುದೇ ಸಂದರ್ಭದಲ್ಲಿ ಈ ಕೆಳಗಿನ ತುರ್ತು ಸೇವೆಗಳ್ನು ಸಂಪರ್ಕಿಸಲು ಸೂಚಿಸಲಾಗಿದೆ
ಕಂಟ್ರೋಲ್ ರೂಂ. : 1077 / 2442590
ಬೆಳ್ತಂಗಡಿ ತಾಲೂಕು : 08256 – 232047
ಮಂಗಳೂರು ತಾಲೂಕು : 0824-2220587
ಉಳ್ಳಾಲ ತಾಲೂಕು : 0824-2204424
ಬಂಟ್ವಾಳ ತಾಲೂಕು : 08255-232500
ಪುತ್ತೂರು ತಾಲೂಕು : 08251-230349
ಸುಳ್ಯ ತಾಲೂಕು : 08257-231231
ಮೂಡಬಿದ್ರೆ ತಾಲೂಕು : 08258-238100
ಮುಲ್ಕಿ ತಾಲೂಕು : 0824-2294496

 

Continue Reading
Click to comment

Leave a Reply

Your email address will not be published. Required fields are marked *

Advertisement