Published
5 months agoon
By
Akkare Newsದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 31-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಗಳಿಗೆ ದಿನಾಂಕ: 31-07-2024 ರಂದು ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ತಗ್ಗು ಪ್ರದೇಶದಲ್ಲಿ ನೆರೆ ಭೀತಿ-ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
ಉಳಿದಂತೆ ದುರ್ಬಲ ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ಪಾಠ ಪ್ರವಚನ ನಡೆಸದಂತೆ ತಿಳಿಸಲಾಗಿದ್ದು, ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಗಳ ಯಾವುದೇ ಸಂದರ್ಭದಲ್ಲಿ ಈ ಕೆಳಗಿನ ತುರ್ತು ಸೇವೆಗಳ್ನು ಸಂಪರ್ಕಿಸಲು ಸೂಚಿಸಲಾಗಿದೆ
ಕಂಟ್ರೋಲ್ ರೂಂ. : 1077 / 2442590
ಬೆಳ್ತಂಗಡಿ ತಾಲೂಕು : 08256 – 232047
ಮಂಗಳೂರು ತಾಲೂಕು : 0824-2220587
ಉಳ್ಳಾಲ ತಾಲೂಕು : 0824-2204424
ಬಂಟ್ವಾಳ ತಾಲೂಕು : 08255-232500
ಪುತ್ತೂರು ತಾಲೂಕು : 08251-230349
ಸುಳ್ಯ ತಾಲೂಕು : 08257-231231
ಮೂಡಬಿದ್ರೆ ತಾಲೂಕು : 08258-238100
ಮುಲ್ಕಿ ತಾಲೂಕು : 0824-2294496