Published
5 months agoon
By
Akkare Newsಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಾರಿ ಮಳೆಯಾಗಲಿದ್ದು, ಗಾಳಿ 30 – 40 ಕಿಲೋ ಮೀಟರ್ ಬೀಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ