Published
5 months agoon
By
Akkare Newsಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜುಲೈ 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಸಹಪಾಠಿಗಳು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.