Published
5 months agoon
By
Akkare Newsದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ಈ ಕಾರಣದಿಂದ ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕು.