Published
5 months agoon
By
Akkare Newsಪುತ್ತೂರು: ಪುತ್ತೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಪ್ಪಳಿಗೆಯಲ್ಲಿ ಗುಡ್ಡ ಕುಸಿಯುವ ಭೀತಿಯಲ್ಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ವೇಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗುವುದು ಎಂದು ಪುತ್ತೂರು ಸಹಾಯಕ ಕಮೀಷನರ್ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
ಆ.2ರ ನಸುಕಿನ ಜಾವ ಬಪ್ಪಳಿಗೆ ಬೈಪಾಸ್ ಬಳಿ ಗುಡ್ಡದಿಂದ ಮಣ್ಣು ರಸ್ತೆಯ ಮೇಲೆ ಕುಸಿದಿತ್ತು. ಕುಸಿದ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದರೂ ಗುಡ್ಡದ ಮೇಲೆ ಕೆಲವೊಂದು ಅಪಾಯಕಾರಿ ಮರಗಳಿರುವ ಹಿನ್ನಲೆಯಲ್ಲಿ ಮತ್ತೆ ಗುಡ್ಡ ಕುಸಿಯುವ ಭೀತಿಯಿದೆ.
ಹಾಗಾಗಿ ರಾತ್ರಿ ವೇಳೆ ಬೈಪಾಸ್ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಾಗಿ ಪುತ್ತೂರು ಪೇಟೆಯನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚಿಸಲಾಗಿದೆ ಎಂದವರು ತಿಳಿಸಿದ್ದಾರೆ.