Published
5 months agoon
By
Akkare Newsಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ ಕಡೆಗಳಿಗೆ ಭೇಟಿ ನೀಡಲಿದ್ದಾರೆ.
ಇಂದು ಬೆಂಗಳೂರಿನಲ್ಲಿ ವಿವಿಧ ಸಚಿವರ ಭೇಟಿ ಹಾಗೂ ಕಂಬಳ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿ ಇಂದು ಪುತ್ತೂರಿಗೆ ಬರಲಿದ್ದು ಮಳೆಯ ಕಾರಣಕ್ಕೆ ಅನೇಕ ಕಡೆಗಳಲ್ಲಿ ಧರೆ ಕುಸಿಯ, ಮನೆಗಳಿಗೆ ಹಾಗೂ ಕೃಷಿಗಳಿಗೆ ಹಾನಿಯಾಗಿದ್ದು ಹಿಂದೆಂದೂ ಕಂಡರಿಯದ ರೀತಿಯಲ್ಲಿಮಳೆಗೆ ಅನಾಹುತಗಳು ಸಂಭವಿಸಿದೆ.
ದಿನದ. 24 ಗಂಟೆ ಅಲರ್ಟ್ ಆಗಿರುವಂತೆ ಶಾಸಕರು ಎರಡು ದಿನಗಳ ಹಿಂದೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದರು. ಪೃಕೃತ್ತಿ ವಿಕೋಪದಿಂದ ಯಾವುದೇ ಜೀವ ಹಾನಿ ಸಂಭವಿಸದೇ ಇದ್ದರೂ ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಇಂದು ಶಾಸಕರು ಕೆಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
10 ಕೋಟಿ ರೂ ಪರಿಹಾರಕ್ಕೆ ಸಿ ಎಂ ಮನವಿ
ಮಳೆಯಿಂದ ತತ್ತರಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ ಪರಿಹಾರವನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ. ಮನೆ ಕುಸಿತ, ಧರೆ ಕುಸಿತದಿಂದ ಮನೆ ಹಾನಿಗೊಳಗಾದ ವರಿಗೆ ಪತಿಹಾರ ನೀಡುವಲ್ಲಿ ಸರಕಾರ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿಮಾಡಿದರು.
ಮುಂದಿನ ವಾರ ಸೀಎಂ ಪುತ್ತೂರು ಭೇಟಿ
ಪೃಕೃತ್ತಿ ವಿಜೋಪದಿಂದ ಆಗಿರುವ ಅನಾಹುತವನ್ನು ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ. 6 ಅಥವಾ 7 ರಂದು ಭೇಟಿ ನೀಡಲಿದ್ದಾರೆ. ಪುತ್ತೂರಿಗೆ ಭೇಟಿ ನೀಡುವಂತೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದು ಇದಕ್ಕೆ ಸಿ ಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.