Published
5 months agoon
By
Akkare Newsಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಮಳೆ ಹವಾ ಜೋರಾಗಲಿದೆ . ಅಂತೆಯೇ ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.ಸದ್ಯ ಸದ್ಯ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ.
ಇನ್ನು ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
‘ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.