Published
5 months agoon
By
Akkare Newsನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಿಂಚನ(30) ಎಂದು ಗುರುತಿಸಲಾಗಿದೆ.
ನೆಲಮಂಗಲ ತಾಲೂಕಿನ ತೋಟನಹಳ್ಳಿ ಗ್ರಾಮದ ಮಂಜುನಾಥ್, ಸಿಂಚನ ದಂಪತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ ತೆರಳುವಾಗ ಹಿಂಬದಿಯಿಂದ ಲಾರಿ ಗುದ್ದಿದೆ.
ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪತ್ನಿಯ ಸಾವು ಕಂಡು ಪತಿ ಮಂಜುನಾಥ್ ರಸ್ತೆಯಲ್ಲೇ ಕಣ್ಣೀರಿಟ್ಟಿದ್ದಾರೆ. ಲಾರಿ ಚಾಲಕ ಅತಿ ವೇಗ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
.