Connect with us

ರಾಜಕೀಯ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

Published

on

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.

 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ ದಾನಿಯಾದ ಶ್ರೀ ಧರ್ಮಪಾಲ ಅವರು ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದರು.

 

ಸಂಸ್ಥೆಯ ಸಂಚಾಲಕರಾದ ಶ್ರೀಯುತ ಎ.ವಿ ನಾರಾಯಣ, ಪ್ರಧಾನ ಕಾರ್ಯದರ್ಶಿಯವರಾದ ಶ್ರೀಯುತ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷರಾದ ಶ್ರೀಯುತ ಉಮೇಶ್ ಮಳುವೇಲು, ಹಾಗೂ ನಿರ್ದೇಶಕರಾದ ಶ್ರೀಮತಿ ಪ್ರತಿಭಾದೇವಿ ರವರು ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುತ್ತೂರು ತುಳು ಕೂಟದ ಅಧ್ಯಕ್ಷರಾದ ಶ್ರೀ ಪ್ಯಾಟ್ರಿಕ್ ಸಿಪ್ರಿಯಾನ್ ಮಸ್ಕರೇನಸ್, ಬೋಧಕ ಬೋಧಕೇತರ ವೃoದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

.

ವಿದ್ಯಾರ್ಥಿನಿಯರಾದ ಆನ್ವಿ, ಶಿವಾನಿ, ಅದ್ವಿತಿ, ಜ್ಯೋಸ್ತ್ನ, ಚಾರ್ವಿ ಪ್ರಾರ್ಥಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಕುಮಾರಿ ಕೆ ಯವರು ಸ್ವಾಗತಿಸಿದರು, ಶಿಕ್ಷಕಿಯರಾದ ಶ್ರೀಮತಿ ರಂಜಿತಾ ರೈ ಯವರು ವಂದನಾರ್ಪಣೆ ಗೈದು ಶ್ರೀಮತಿ ವನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

 

 

.


 

Continue Reading
Click to comment

Leave a Reply

Your email address will not be published. Required fields are marked *

Advertisement