ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಮುಕ್ಕೂರು : 15 ನೇ ವರ್ಷದ ಗಣೇಶೋತ್ಸವ ಆಚರಣೆ :ನಳೀಲು ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ನಳೀಲು : ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹದಿನೈದನೇ ವರ್ಷದ ಗಣೇಶೋತ್ಸವ- (ಮೂರೈದು- ಹದಿನೈದರ ಹುತ್ತರಿ) ಸೆ.7 ಮತ್ತು 8 ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.

 

 

 

ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ಷೇತ್ರದ ಅರ್ಚಕ ಪ್ರವೀಣ್ ಶಂಕರ್ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ, ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಮಾಜಿ ಅಧ್ಯಕ್ಷರಾದ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಜಯಂತ ಗೌಡ ಕುಂಡಡ್ಕ, ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version