ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ನಮ್ಮ ದೇಶದ ಕ್ರೀಡಾ ವಿಜೇತರನ್ನು ಅಭಿನಂದಿಸಿದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಬಿ. ಗುಣರಂಜನ್ ಶೆಟ್ಟಿ

Published

on

ಪ್ಯಾರಿಸ್ ನಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ ಕ್ರೀಡಾಕೂಟದಲ್ಲಿ 57 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದ ಭಾರತದ ಕುಸ್ತಿಪಟು ಅಮನ್ ಅವರನ್ನು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಭಾರತೀಯ ಕುಸ್ತಿ ಸಂಘದ ಅಧ್ಯಕ್ಷರಾದ ಸಂಜಯ್ ಸಿಂಗ್ ಅವರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ನ ಇಂಡಿಯಾ ಹೌಸ್’ನಲ್ಲಿ ಅಭಿನಂದಿಸಿದರು.

 

 

 

ಇವರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ನ ಇಂಡಿಯಾ ಹೌಸ್’ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕಗಳ ವಿಜೇತರಾದ ನೀರಜ್ ಚೋಪ್ರಾ, ಮನು ಬಾಕರ್ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿಟಿ ಉಷಾ ಅವರನ್ನು ಸನ್ಮಾನಿಸಿ ಗೌರವಿಸಿದರು.

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯಗರ್ಶಿಗಳು ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಆಗಿರುವ ಬಿ. ಗುಣರಂಜನ್ ಶೆಟ್ಟಿಯವರು ರಿಪಬ್ಲಿಕ್ ಆಫ್ ಫ್ರಾನ್ಸ್ ನ ಭಾರತದ ರಾಯಭಾರಿ ಜಾವೇದ್ ಅಶ್ರಫ್ ಮತ್ತು JSW ಗ್ರೂಪ್ ನ ಬಿಸಿನೆಸ್ ಟೈಕೂನ್ ಪಾರ್ಥ್ ಜಿಂದಾಲ್ ಹಾಗೂ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC) ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷೆ ನೀತಾ ಅಂಬಾನಿ ಅವರನ್ನು ಭೇಟಿಯಾದರು.

ಈ‌ ಸಂಧರ್ಭದಲ್ಲಿ ಭಾರತೀಯ ಕುಸ್ತಿ ಸಂಘದ ಅಧ್ಯಕ್ಷರಾದ ಸಂಜಯ್ ಸಿಂಗ್ ಮತ್ತು ಪದಾಧಿಕಾರಿಗಳು, ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಿವಾಸ್ ಕಾರ್ಯದರ್ಶಿ ಕುಮಾರ್ ಜಯರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಭಾರತೀಯ ಕುಸ್ತಿ ಒಕ್ಕೂಟ (ವ್ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ)

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version