Published
2 years agoon
By
Akkare News
ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು.



ಸಮಿತಿಯ ಅಧ್ಯಕ್ಷ ರು , ಉಪಾಧ್ಯಕ್ಷರುಗಳು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಈ ಸಂದರ್ಭ ಉಪಸ್ಥಿತರಿದ್ದರು. ಸಾರ್ವಜನಿಕ ಶ್ರೀ ಗಣೀಶೋತ್ಸವವು ಸೆಪ್ಟೆಂಬರ್ 7 ರಿಂದ 9 ರ ತನಕ ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಮೂರು ದಿವಸಗಳ ಕಾಲ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ಹಾಗೂ ವಿವಿಧ ಸ್ಪರ್ಧೆಗಳೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಲಿರುವುದು.






