Published
4 months agoon
By
Akkare Newsವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು.
ಸಮಿತಿಯ ಅಧ್ಯಕ್ಷ ರು , ಉಪಾಧ್ಯಕ್ಷರುಗಳು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಈ ಸಂದರ್ಭ ಉಪಸ್ಥಿತರಿದ್ದರು. ಸಾರ್ವಜನಿಕ ಶ್ರೀ ಗಣೀಶೋತ್ಸವವು ಸೆಪ್ಟೆಂಬರ್ 7 ರಿಂದ 9 ರ ತನಕ ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಮೂರು ದಿವಸಗಳ ಕಾಲ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ಹಾಗೂ ವಿವಿಧ ಸ್ಪರ್ಧೆಗಳೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಲಿರುವುದು.