Published
5 months agoon
By
Akkare Newsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಇಳಿಕೆಯಾದಂತೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ರವಿವಾರ ಸೆಕೆಯಿಂದ ಕೂಡಿದ ವಾತಾವರಣ ಇತ್ತು. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 30 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.3 ಡಿ.ಸೆ.
ಏರಿಕೆ ಮತ್ತು 24.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಏರಿಕೆಯಾಗಿತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆ, ಮೋಡದಿಂದ ಕೂಡಿದ ವಾತಾವರಣ ಇರುವ
ಸಾಧ್ಯತೆ ಇದೆ.
ಉಡುಪಿಯಲ್ಲೂ ಇಳಿಕೆ
ಉಡುಪಿ: ಜಿಲ್ಲೆಯಲ್ಲಿ ರವಿವಾರ ಮಳೆ ಕಡಿಮೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಉಡುಪಿ, ಕಾಪು, ಪಡುಬಿದ್ರಿ, ಕಾರ್ಕಳ, ಕುಂದಾಪುರ, ಬೈಂದೂರು ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ.
ಶನಿವಾರ ತಡರಾತ್ರಿ ಕೆಲವೆಡೆ ಹೆಚ್ಚು ಮಳೆಯಾಗಿದೆ. ರವಿವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 11.1 ಮಿ. ಮೀ. ಸರಾಸರಿ ಮಳೆಯಾಗಿದೆ.