ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪುತ್ತೂರು : ಸ್ವಾತಂತ್ರ್ಯೋತ್ಸವಕ್ಕೆ ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜ, ಇತರೆ ವಸ್ತು ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶ!

Published

on

ಪುತ್ತೂರು : ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದ್ದು, ಪ್ಲಾಸ್ಟಿಕ್ ನಿಂದ ತಯಾರಿಸಲಾದ ರಾಷ್ಟ್ರಧ್ವಜ ಹಾಗೂ ಇತರೆ ಸಂಬಂಧಪಟ್ಟ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶಿಸಿದೆ.

 

ಸರ್ಕಾರದ ಆದೇಶದಂತೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ನಿಂದ ತಯಾರಾದಂತಹ ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ (ಸಿಂಗಲ್ Use Plastic-SUP) ಉತ್ಪನ್ನ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆಯಿಂದ ಆದೇಶ ಹೊರಡಿಸಲಾಗಿದೆ.

 

 

ನಗರ ವ್ಯಾಪ್ತಿಯ ಎಲ್ಲಾ ನಾಗರೀಕರು ಮತ್ತು ವರ್ತಕರು ಆ.15ರಂದು ಆಚರಿಸಲ್ಪಡುವ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ರಾಷ್ಟ್ರಧ್ವಜ ಮತ್ತು ಇತರೆ ಸಂಬಂಧಪಟ್ಟ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ತಿಳಿಸಿದೆ.

 

 

 

ನಿಯಮ ಉಲ್ಲಂಘಿಸಿ ಯಾವುದೇ ಉದ್ದಿಮೆ ಕಟ್ಟಡದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ರಾಷ್ಟ ಧ್ವಜಗಳನ್ನು ತಯಾರಿಸುವುದು, ದಾಸ್ತಾನು ಮಾಡುವುದು ಮತ್ತು ಮಾರಾಟ ಮಾಡುವುದನ್ನು ಕಂಡು ಬಂದಲ್ಲಿ ವಶಪಡಿಸಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement