ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾರ್ಯಕ್ರಮಗಳು

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 10ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಪ್ರಶಸ್ತಿ ಪ್ರದಾನ

Published

on

ಕಾಣಿಯೂರು: ಶತಮಾನೋತ್ಸವಸ ಸಂಭ್ರಮದಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

 

ಆ.14ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಂ.ಎನ್.ರಾಜೇಂದ್ರ ಕುಮಾ‌ರ್ ಅವರು ಸಂಘದ ಅಧ್ಯಕ್ಷರಾದ ಗಣೇಶ್ ಉದನಡ್ಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್‌ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

 

 

ಸತತ 10ನೇ ಬಾರಿ ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2019-20ನೇ ಸಾಲಿನಲ್ಲಿ
ಅವಿಭಜಿತ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಶೇಕಡಾ 100ರಷ್ಟು ಸಾಲ ವಸೂಲಾತಿಯಾಗಿದ್ದು,

ಇದರಲ್ಲಿ ಪುತ್ತೂರು,ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳ ಸಹಕಾರ ಸಂಘಗಳ ಪೈಕಿ ಶೇಕಡಾ 100 ಸಾಲ ವಸೂಲಾತಿಯಾಗಿದ್ದು, ಇದರಲ್ಲಿಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳ ಸಹಕಾರಸಂಘಗಳ ಪೈಕಿ ಶೇಕಡಾ 100 ಸಾಲ ವಸೂಲಾತಿಯಾದಏಕೈಕ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಚಾರ್ವಾಕಪ್ರಾ.ಕೃ.ಪ.ಸ,ಸಂಘವು ಪಾತ್ರವಾಗಿ ಈ ಸನ್ಮಾನಕ್ಕೆ ಭಾಜನವಾಗಿತ್ತು.

 

ಪ್ರಶಸ್ತಿ ಸ್ವೀಕಾರ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ ನಿರ್ದೇಶಕರುಗಳಾದ ಅನಂತಕುಮಾರ್‌ ಬೈಲಂಗಡಿ, ಪರಮೇಶ್ವರ ಅನಿಲ, ಸುಂದರ ಗೌಡ ದೇವಸ್ಯ, ವಿಶ್ವನಾಥ ಕೂಡಿಗೆ, ರತ್ನಾವತಿ ಮುದುವ, ರಮೇಶ್ ಉಪ್ಪಡ್ಕ, ವೀಣಾ ಅಂಬುಲ, ಶೀಲಾವತಿ ಮುಗರಂಜ, ಲೋಕೇಶ್ ಗೌಡ ಆತಾಜೆ, ದಿವಾಕರ ಗೌಡ ಮರಕ್ಕಡ ಉಪಸ್ಥಿತರಿದ್ದರು.

 

ಎಂದು ಆರೋಪಿಸಿ ಮೊಟ್ಟೆತ್ತಡ್ಕ ಮಿಷನ್ ಮೂಲೆ ಜನತಾ ಕಾಲನಿ ನಿವಾಸಿಗಳು ಮತ್ತು ಸಾರ್ವಜನಿಕರು ಪುತ್ತೂರು ಸಹಾಯಕ ಕಮೀಷನರ್‌ ಪುತ್ತೂರು ಉಪವಿಭಾಗ ಅವರಿಗೆ ಮನವಿ ಪತ್ರವನ್ನು ನೀಡಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಹಾಗೂ ಶಾಲಾ ಕಾಲೇಜು ಮಕ್ಕಳ ವಿದ್ಯಾಭ್ಯಾಸದ ದೃಷ್ಟಿಯಿಂದ ಈ ಮೊಬೈಲ್ ಟವರ್ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಿ ಸ್ಥಳಾಂತರಿಸುವಂತೆ ತಿಳಿಸಿದರು.

ಪ್ರತಿಭಟನರನ್ನು ಉದ್ದೇಶಿಸಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ರಫಿಕ್ ಎಂ. ಕೆ ಮಾತನಾಡಿ, ಮೊಟ್ಟೆತಡ್ಕದಲ್ಲಿ ನೂತನ ವಾಗಿ ನಿರ್ಮಾಣ ವಾಗಲಿರುವ ಮೊಬೈಲ್ ಟವರ್ ನಿಂದ ಸಾರ್ವಜನಿಕರಿಗೆ ತೊಂದರೆ ಯಾಗುದಾದರೆ ಅದರ ವಿರುದ್ದ ವಾಗಿ ಜೈಲಿಗೆ ಹೋದರು ಹೋರಾಟ ಮಾಡುತ್ತೇನೆ, ಸಾರ್ವಜನಿಕರಿಗೆ ಆಗುವ ತೊಂದರೆ ಗಳನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಪೊಲೀಸ್‌ ಸಿಬ್ಬಂದಿ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಕಲೆ ಹಾಕಿ ಉನ್ನತ ಅಧಿಕಾರಿಗಳಿಗೆ ಈ ಬಗ್ಗೆ ಮತ್ತೊಮ್ಮೆ ಮನವಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯೆ ಶೈಲಾ ಪೈ, ಅಬ್ದುಲ್ಲ ಕೆ, ವಿಶ್ವನಾಥ ಟೈಲರ್, ರಫೀಕ್ ಎಂ.ಕೆ, ರೊನಾಲ್ಡ್ ಮೊಂತೇರೊ, ಸುರೇಂದ್ರ ಎ, ಸುರೇಂದ್ರ ಪೂಜಾರಿ, ಹಮೀದ್ ಸಹಿತ ಹಲವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version