Published
4 months agoon
By
Akkare Newsಉಪ್ಪಿನಂಗಡಿ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.