Published
4 months agoon
By
Akkare Newsಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಅನಾವರಣ ಕಾರ್ಯಕ್ರಮವು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.
ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂಧರ್ಭದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಅಧ್ಯಕ್ಷ ರಾಜೇಶ್ ಮೀಜೆ, ಕಾರ್ಯದರ್ಶಿ ದೀಕ್ಷಿತ್ ಕಂಪ, ಉಪಾಧ್ಯಕ್ಷ ಧರ್ಮಪಾಲ ಕಲ್ಪಡ, ಭಜನಾ ಮಂಡಳಿಯ ಕಾರ್ಯದರ್ಶಿ ಜಯಂತ ಅಬೀರ, ಕೃಷ್ಣ ಪ್ರಸಾದ್ ಭಟ್, ವಾಸುದೇವ ನಾಯ್ಕ ತೋಟ, ವಿಶ್ವನಾಥ ಓಡಬಾಯಿ, ದಿವಾಕರ ಬೆದ್ರಾಜೆ, ಸುಂದರ ಬೆದ್ರಾಜೆ, ಪುನೀತ್ ಕಲ್ಪಡ, ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಲೋಕೇಶ್ ಅಗಳಿ, ಕಾರ್ಯದರ್ಶಿ ನಾಗವೇಣಿ ಬೆದ್ರಾಜೆ ಉಪಸ್ಥಿತರಿದ್ದರು.