ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಶಾಲಾ ಚಟುವಟಿಕೆ

ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ಕಾಲೇಜ್ ನಲ್ಲಿ”ಗ್ರಾಟಿಟ್ಯೂಡ್” ಕಾರ್ಯಕ್ರಮ

Published

on

ವಿದ್ಯಾರ್ಥಿಗಳು ಕ್ರಿಯಾಶೀಲತೆ ಯನ್ನು ಮೈಗೂಡಿಸಿಕೊಂಡು ಯಶಸ್ಸಿನ ಕನಸು ಕಾಣಬೇಕು : ಅಮ್ಜದ್ ಖಾನ್

ಪುತ್ತೂರು : ವಿದ್ಯಾರ್ಥಿ ಗಳು ನಿರಂತರ ಕ್ರಿಯಾಶೀಲತೆ ಯನ್ನು ಮೈಗೂಡಿಸಿಕೊಂಡು ಯಶಸ್ಸಿನ ಕನಸು ಕಂಡರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅನಿವಾಸಿ ಉದ್ಯಮಿ ಪುತ್ತೂರು ಎಜುಕೇಷನಲ್ ಎಕ್ಸಲೆನ್ಸ್ ಫೌಂಡೇಶನ್ ಅಧ್ಯಕ್ಷ ಹಾಜಿ ಅಮ್ಜದ್ ಖಾನ್ ಅವರು ಹೇಳಿದರು.

ಅವರು ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನಲ್ಲಿ ನಡೆದ “ಗ್ರಾಟಿಟ್ಯೂಡ್” ಕಾರ್ಯಕ್ರಮ ದಲ್ಲಿ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಪ್ರಗತಿ ಸಾಧಿಸಬೇಕಾದರೆ ಶಿಕ್ಷಣ ಅಗತ್ಯ ಈ ನಿಟ್ಟಿನಲ್ಲಿ ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಗಳ ಸೇವಾ ಸಾಧನೆ ಶ್ಲಾಘನೀಯ ವಾಗಿದೆ ಎಂದ ಅವರು, ಕಲಿಕೆಗೆ ಬಡತನ ಅಡ್ಡಿಯಾಗ ಬಾರದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು. ಮುಹಮ್ಮದ್ ಹಾಜಿ ಪಡೀಲ್ ಅವರು, ಸಮುದಾಯದ ವಿದ್ಯಾರ್ಥಿಗಳಿಗೆ ನೆರವಾಗಿ ಅವರ ಭವಿಷ್ಯ ರೂಪಿಸುವ ಕೆಲಸವನ್ನು ಸಮುದಾಯದ ನಾಯಕರು ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಎಜುಕೇಷನಲ್ ಎಕ್ಸಲೆನ್ಸ್ ಫೌಂಡೇಶನ್ ನ ಅಧ್ಯಕ್ಷ ಅಮ್ಜದ್ ಖಾನ್ ರಂತಹ ಅನಿವಾಸಿ ಉದ್ಯಮಿಗಳ ನಿಸ್ವಾರ್ಥ ಸೇವೆ ಅನುಕರಣೀಯ ವಾಗಿದೆ ಎಂದರು.

ಕಾರ್ಯಕ್ರಮ ವನ್ನು ಉದ್ಗಾಟಿಸಿ ಮಾತನಾಡಿದ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಹಾಜಿ ಮುಹಮ್ಮದ್ ಸಾಬ್ ರವರು, ಬದುಕಲ್ಲಿ ನೆರವಾದವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂಘಟಿಸಿರುವ “ಗ್ರಾಟಿಟ್ಯೂಡ್” ಕಾರ್ಯಕ್ರಮವು ಮಾದರಿಯಾಗಿದೆ ಎಂದರು.

ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಧನೆಯ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಅನಿವಾಸಿ ಉದ್ಯಮಿ ಅಮ್ಜದ್ ಖಾನ್ ಮತ್ತು ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಅವರನ್ನು ಸಂಸ್ಥೆಯ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ಝುಲೈಖಾಬಿ , ಸಾಲ್ಮರ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮೋಹನಾಂಗಿ, ಶಾಲಾ ದೈಹಿಕ ಶಿಕ್ಷಕ ಅಶ್ರಫ್ ,ಕಾರ್ಯಾಲಯ ನಿರ್ವಾಹಕ ಅಬ್ದುಲ್ ಹಮೀದ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿಯರಾದ ಸಾಜಿದಾ ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತಿಸಿದರು.ಮಿಶ್ರಿಯಾ ಅಸ್ವಾಲಿಹಾ ಕೊನೆಗೆ ವಂದಿಸಿದರು. ಶಾಲಾ ಶಿಕ್ಷಕ ಅಬ್ದುರ್ರವೂಫ್ ಕಾರ್ಯಕ್ರಮ ನಿರ್ವಹಿಸಿದರು.

ಕಾಲೇಜ್ ನ ಉಪನ್ಯಾಸಕಿಯರು ಮತ್ತು ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿನಿಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version