ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೀಡೆ

ಪುತ್ತೂರು ಮೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರು ಶ್ರೀ ರಾಮಚಂದ್ರ ಎ ರವರ ಪುತ್ರ ಲಿಖಿತ್ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ

Published

on

ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 17ನೇ ಶನಿವಾರದಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಧ್ಯಮ ಸ್ಕೂಲ್ ನ 8ನೇ ತರಗತಿ ವಿದ್ಯಾರ್ಥಿಯಾದ ಲಿಖಿತ್ ರಾಮಚಂದ್ರ ಇವರು, 200 ಮೀಟರ್ ಬ್ರೆಸ್ಟ್ ಸ್ಟ್ರೊಕ್ , 100 ಮೀಟರ್ ಬ್ರೆಸ್ಟ್ ಸ್ಟ್ರೊಕ್ ಮತ್ತು 50 ಮೀಟರ್ ಬ್ರೆಸ್ಟ್ ಸ್ಟ್ರೊಕ್ ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಂತೆಯೇ, 100ಮೀಟರ್ ಫ್ಲೈ , 4×100 ರಿಲೇ, ಯಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಳ್ಳುವ ಮೂಲಕ ವಯುಕ್ತಿಕ ರನ್ನರ್ ಅಪ್ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ಇವರು ಪುತ್ತೂರು ಮೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರು ಶ್ರೀ ರಾಮಚಂದ್ರ ಎ ಮತ್ತು ದರ್ಬೆ ದೀಪ ಬ್ಯೂಟಿ ಪಾರ್ಲರ್ ಮಾಲಕಿ ಶ್ರೀಮತಿ ದೀಪ ರವರ ಪುತ್ರ

ಇವರು, ಪುತ್ತೂರಿನ ಬಾಲವನದ ಈಜು ತರಬೇತಿದಾರರಾದ; ಪಾರ್ಥ ವಾರಣಾಸಿ, ನಿರೂಪ್ ಕೋಟ್ಯಾನ್ ಮತ್ತು ದೀಕ್ಷಿತ್ ಇವರಿಂದ ಸುಮಾರು 8ವರ್ಷಗಳಿಂದ ತರಬೇತಿ ಪಡೆಯುತ್ತಿದ್ದಾರೆ.


Continue Reading
Click to comment

Leave a Reply

Your email address will not be published. Required fields are marked *

Advertisement