ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ನಾರಾಯಣ ಗುರುಗಳ ಆದರ್ಶಗಳು ಮುಂದಿನ ಭವಿಷ್ಯದ ದಾರಿದೀಪ: ರಾಜೇಶ್ ನಾಯ್ಕ್.

Published

on

ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು

ಅವರು ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವರಾದ ಬಿ.ರಮಾನಾಥ ರೈ ಇವರು ಮಾತನಾಡಿ ನಾರಾಯಣಗುರುಗಳು ಯಾವುದೇ ಸಮಾಜಕ್ಕೆ ಸೀಮಿತವಾದ ಗುರುಗಳು ಅಲ್ಲ ಅವರು ಇಡೀ ಮನುಕುಲದ ಗುರುಗಳು ಎಂದರು.

35 ವರ್ಷಗಳಿಂದ ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ಯುವವಾಹಿನಿಯು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ ಈ‌ ನಿಟ್ಟಿನಲ್ಲಿ ಯುವವಾಹಿನಿಯು ಅಚ್ಚುಮೆಚ್ಚಿನ ಸಂಘಟನೆಯಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ತಿಳಿಸಿದರು.

ಶಿಕ್ಷಕ ಮಹೇಶ್ ಕರ್ಕೇರಾ ಗುರುಜಯಂತಿಯ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿ ಮೌನ ಕ್ರಾಂತಿಯ ಮೂಲಕ ಪರಿವರ್ತನೆಯ ದೀಪ ಬೆಳಗಿದ ದಾರ್ಶನಿಕ ನಾರಾಯಣಗುರುಗಳು ಎಂದರು.

ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ ಮುಖ್ಯೋಪದ್ಯಾಯರಾದ ಸಂತೋಷ ಕುಮಾರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ‌ ವಿತರಣೆ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗ ದೊಂದಿಗೆ, ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ನಡೆದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಧನುಶ್ರೀ ಸಿದ್ದಕಟ್ಟೆ, ದ್ವಿತೀಯ ಅಪೇಕ್ಷ ಸಿದ್ದಕಟ್ಟೆ, ತೃತೀಯ ಪ್ರಗತಿ ಮಾಣಿ, ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ನಿನಾದ್ ಕೈರಂಗಳ, ದ್ವಿತೀಯ ದೀಕ್ಷಾ ಸುವರ್ಣ ಬೋಳಂತೂರು, ತೃತೀಯ ವಿಶ್ಮಾ ಸುವರ್ಣ ಬಂಟ್ವಾಳ ಇವರಿಗೆ ಈ ಸಂದರ್ಭದಲ್ಲಿ ಬಹುಮಾನ‌ ವಿತರಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉಪನ್ಯಾಸಕರಾದ ಡಾ.ಯಶು ಕುಮಾರ್, ಶಿಕ್ಷಕಿ ರೇಣುಕಾ ಕಣಿಯೂರು, ಅರ್ಚನಾ ಎಮ್.ಬಂಗೇರ, ಚೇತನ್ ಮುಂಡಾಜೆ, ಹರ್ಷಿತ್ ಕೊಯಿಲ ತೀರ್ಪುಗಾರರಾಗಿ ಸಹಕರಿಸಿದ್ದರು.

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ಸ್ವಾಗತಿಸಿ, ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ವಂದಿಸಿ,ಧನುಷ್ ಮದ್ವ ಕಾರ್ಯಕ್ರಮ ನಿರೂಪಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version