ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೀಡೆ

ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Published

on

ಕಲ್ಲಡ್ಕ : ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿ ಆಗುತ್ತೆ ಎಂದು ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸರಕಾರಿ ಪ್ರಾಥಮಿಕ ಶಾಲೆ ನೆಟ್ಲ, ಇವುಗಳ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕವಲಯ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಗೋಳ್ತಮಜಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ್,ಸದಸ್ಯ ದೀಪಕ್ ಕುಮಾರ್, ಶಂಬೂರ್ ಶಾಲಾ ಮುಖ್ಯ ಶಿಕ್ಷಕ ಜಯರಾಮ್, ಕಡೆಶಿವಾಲಯ ಶಾಲಾ ದೈಹಿಕ ಶಿಕ್ಷಕ ಭಾಸ್ಕರ್, ನೆಟ್ಲಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ವಿನಯ,ಮಾಜಿ ಗ್ರಾಮ ಪಂಚಾಯತ್ ಸದಸ್ಯ ಲೋಕನಾಥ್ ಕುಲಾಲ್, ನೇರಳಕಟ್ಟೆ ಶಾಲಾ ದೈಹಿಕ ಶಿಕ್ಷಕಿ ಶೋಭಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶೋಭಲತಾ ಬಿ ಸ್ವಾಗತಿಸಿ, ಶಾಲಾ ಕಂಪ್ಯೂಟರ್ ಶಿಕ್ಷಕಿ ಇಂದಿರಾ ವಂದಿಸಿ, ಸಹ ಶಿಕ್ಷಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಕ್ರೀಡಾಕೂಟದ ನೆನಪಿಗಾಗಿ ಹಣ್ಣಿನ ಗಿಡ ನೆಟ್ಟು, ಕ್ರೀಡಾಂಗಣಕ್ಕೆ ಫಲ ಪುಷ್ಪ ಸಮರ್ಪಿಸಿ ಪಂದ್ಯಾಟವನ್ನು ಪ್ರಾರಂಭಿಸಲಾಯಿತು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರಾಥಮಿಕ ಶಾಲೆ ಅನಂತಾಡಿ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಾಣಿ ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಂಬೂರ್ ಪಡೆದುಕೊಂಡಿತ್ತು.

ವಿಜೇತ ಶಾಲಾ ತಂಡಗಳಿಗೆ ಟ್ರೋಪಿ ನೀಡಿ ಗೌರವಿಸಲಾಯಿತು. ಉಳಿದಂತೆ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಲಾ ಪರವಾಗಿ ಕ್ರೀಡಾಕೂಟದ ನೆನಪಿನ ಸ್ಮರಣೆಕೆ ನೀಡಲಾಯಿತು.
ಕ್ರೀಡಾಕೂಟದ ಯಶಸ್ವಿಗೆ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು , ಹಳೆ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಅಡುಗೆ ಸಿಬ್ಬಂದಿಗಳು ಸಹಕರಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement