ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಬಿಜೆಪಿಯವರ ಮಾತು ಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ : ಡಿ.ಕೆ ಶಿವಕುಮಾರ್

Published

on

ಬಿಜೆಪಿಯವರ ಮಾತುಕೇಳಿ ರಾಜ್ಯಪಾಲರು 15 ಬಿ‌ಲ್‌ಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

 

ಸದಾಶಿವನಗರದ ನಿವಾಸದ ಬಳಿ ಇಂದು (ಆ.23) ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ? ಎಂದು ಕೇಳಿದಾಗ, “ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಕೂಡ ಸುಮ್ಮನೆ ಕೂರುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾ‌ಲ್‌ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ, “ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ. ಇತರೆಡೆ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.

 

ಸಚಿವ ಪರಮೇಶ್ವರ್ ಅವರು ಕೂಡ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ, “ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆಯ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಕೂಡ ಎರಡೂ ಕೆಲಸಗಳಿದ್ದು. ಎಲ್ಲರೂ ಒಟ್ಟಿಗೆ ಹೋಗುತ್ತಿದ್ದೇವೆ” ಎಂದು ಹೇಳಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement