Published
4 months agoon
By
Akkare Newsಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ
ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ನಿರ್ಣಯ ಕೈಗೊಂಡು ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಗೊಳ್ಳಲು ಈ ಕ್ರಮ ಜಾರಿ ಮಾಡಲಾಗುತ್ತಿದೆ.
ಈಗಾಗಲೇ ಪ್ರಮುಖ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದ್ದು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ಹತ್ತು ಜನ ಸಿಬ್ಬಂದಿಗಳನ್ನು ನೇಮಿಸಲಾಗಿದೆ
ಸುಗಮ ಸಂಚಾರ ಮಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದು ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿ ಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ಇಂದಿನಿಂದ ದಂಡ ವಿಧಿಸಲಾಗುತ್ತದೆ.
ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಕೂಡ ಪೊಲೀಸರಿಗೆ / ಗೃಹರಕ್ಷಕರಿಗೆ ಮಾಹಿತಿ ನೀಡಬಹುದು. ಕಡ್ಡಾಯವಾಗಿ ಸಂಚಾರ, ಪಾರ್ಕಿಂಗ್ ನಿಯಮ ಪಾಲಿಸಿ, ಸುಗಮ ಸಂಚಾರಕ್ಕೆ ಸಹಕರಿಸುವಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಎಸ.ಐ ಕಾರ್ತಿಕ್ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.