Published
4 months agoon
By
Akkare Newsಬೆಂಗಳೂರು: ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ ಎನ್ನಲಾಗಿದೆ.
ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ, ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ನಾಳೆ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.
ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.
ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿ ಕೊಳ್ಳಬೇಕು.