ಅರಂತೋಡು: ಕುಕ್ಕುಂಬಳ ಸೇತುವೆಯಿಂದ ಕೆಳಗಡೆ ಆಟೋ ರಿಕ್ಷಾವೊಂದು ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ.
ಆಟೋ ಚಾಲಕ ವೇಣುಗೋಪಾಲ ದೇವಮೂಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅವರು ದೇವಮೂಲೆಗೆ ಪ್ರಯಾಣಿಕರನ್ನು ಬಿಟ್ಟು ಪೆರಾಜೆ ಕಡೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ.
ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.