ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕುಂತೂರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ಗೋಡೆ, ಮೇಲ್ಛಾವಣಿ ಕುಸಿತ.ತಪ್ಪಿದ ಅನಾಹುತ- 4 ಮಕ್ಕಳಿಗೆ ಗಾಯ

Published

on

ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಪಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.

 

ಕಡಬ ತಾಲೂಕಿನ ಕುಂತೂರು ಎಂಬಲ್ಲಿ ಸರಕಾರಿ ಶಾಲೆಯ ಕಾಮಗಾರಿ ನಡೆಯುತ್ತಿದ್ದರೂ ಶಿಕ್ಷಕರು ಮಕ್ಕಳನ್ನು ಕಟ್ಟಡದ ಒಳಗಡೆ ಕೂರಿಸಿದ್ದರು.

ಕಟ್ಟಡ ಕುಸಿದ ಸಂದರ್ಭದಲ್ಲಿ ಮಕ್ಕಳು ಆಟವಾಡಲು ಹೊರಗಡೆ ಹೋದದ್ದರಿಂದ ಭಾರೀ ದುರಂತವೊಂದು ತಪ್ಪಿದ್ದು, ನಾಲ್ವರು ಮಕ್ಕಳಿಗೆ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಪಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಪುತ್ತೂರು ಬಿಇಓ ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement