ಕಡಬ ತಾಲೂಕಿನ ಪಂಚಾಯಿತಿ ವ್ಯಾಪ್ತಿಯ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಸಮೇತ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು.
ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.