ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮುಡಾ ಹಗರಣ: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌, ಸಿಎಂಗೆ 2 ದಿನ ರಿಲೀಫ್

Published

on

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್​ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದರು. ಇನ್ನು ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಅವರು ಶನಿವಾರ ವಾದ ಮಂಡಿಸುವುದಾಗಿ ಕೋರ್ಟ್​ಗೆ ತಿಳಿಸಿದರು.

 

 

ಇದಕ್ಕೆ ಕೋರ್ಟ್​ ಸಹ ಒಪ್ಪಿಗೆ ನೀಡಿದೆ. ಇದರೊಂದಿಗೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್, ಆಗಸ್ಟ್ 31 ಬೆಳಗ್ಗೆ 10:30ಕ್ಕೆ ಮುಂದೂಡಿತು.ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಇನ್ನು ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೂ ಸಹ ಸೂಚನೆ ನೀಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version