Published
4 months agoon
By
Akkare Newsಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ದೇಶದ ಆರ್ಥಿಕತೆಯ ಪ್ರಮುಖ ಬೆನ್ನೆಲುಬು ಆಗಿರುವ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದ ಪುಣ್ಕೇದಡಿ ಎಂಬಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ ಭತ್ತ ಕೃಷಿ ನಾಟಿ ಮಾಡುವ ಮಾಡುವ ಕಾರ್ಯಕ್ರಮದ ಅಂಗವಾಗಿ ಗದ್ದೆಯಲ್ಲಿ “ಸೇರೋಣ ವ್ಯವಸಾಯ ಮಾಡೋಣ” ವಿನೂತನ ಕಾರ್ಯಕ್ರಮ ದಿನಾಂಕ 1-9-2024 ನೇ ಅದಿತ್ಯವಾರ ನಡೆಯಲಿರುವುದು.
ಈ ಸಂದರ್ಭದಲ್ಲಿ ಮಕ್ಕಳಿಗೆ, ಪುರುಷರಿಗೆ ಮಹಿಳೆಯರಿಗೆ ಕೆಸರುಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದ್ದು ಕ್ರೀಡಾಕೂಟದ ಬಳಿಕ ಎಲ್ಲರೂ ಸೇರಿ ಗದ್ದೆಯಲ್ಲಿ ನಾಟಿ ಕಾರ್ಯಕ್ರಮ ನೆರವೇರಲಿದೆ.
ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಕ್ರೀಡಾ ಅಭಿಮಾನಿಗಳು ಕೃಷಿ ಆಸಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.