ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ಕೇಸ್​ಗೆ ರಾಷ್ಟ್ರಪತಿ ಎಂಟ್ರಿ; ರಾಜ್ಯ ಸಿಎಸ್​ಗೆ ಪತ್ರ

Published

on

ನವದೆಹಲಿ:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಎಂಟ್ರಿ [ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್​​ ಬಾಬು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದರು.

 

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿಗಳ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.

ಇದೆಲ್ಲಾ ಆಡಿಷನ್​ನ ಒಂದು ಭಾಗ; ಹೇಮಾ ಕಮಿಟಿ ವರದಿ ಬೆನ್ನಲ್ಲೇ ಖ್ಯಾತ ನಟಿಯ ಸ್ಫೋಟಕ ಹೇಳಿಕೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ ರಾಜೇಶ್​ ವರ್ಮ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

ಅಲ್ಲದೆ, ಅರ್ಜಿದಾರರು ಈ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ವಿಳಾಸದಾರರನ್ನು (ಯಾರಿಗೆ ಅರ್ಜಿಯನ್ನು ರವಾನಿಸಲಾಗಿದೆ) ನೇರವಾಗಿ ಸಂಪರ್ಕಿಸಲು ವಿನಂತಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ. ಅರ್ಜಿದಾರರು ತಮ್ಮ ಅರ್ಜಿ/ದೂರು ನೋಂದಾಯಿಸಲು ಪೋರ್ಟಲ್ ಅನ್ನು ಬಳಸಬಹುದು ಎಂದೂ ಸಲಹೆ ನೀಡಲಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version