Published
2 years agoon
By
Akkare News
ಶಾಪಿಂಗ್ ಗೆ ತೆರಳಿದ್ದ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಂತ ಅವರನ್ನು ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಪತ್ನಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ಸದಾನಂದಗೌಡ ಅವರು ಕೂಡಲೇ ಆಸ್ಪತ್ರೆಗೆ ಧಾವಿಸಿದ್ದಾರೆ. ಅವರೊಂದಿಗೆ ದಾಸಹಳ್ಳಿಯ ಶಾಸಕ ಮುನಿರಾಜು ಕೂಡ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.