ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಕಾಲೇಜು ಲೈಫ್ ನ ಮೊದಲ ಬೈಕ್ ಬಗ್ಗೆ ವಿಶೇಷ ಪ್ರೀತಿ ಇರುತ್ತೆ. ಇದೀಗ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ ಮೊದಲ ಬೈಕ್ ನೋಡಿ ಪುಳಕಿತರಾಗಿದ್ದಾರೆ.
ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿಸಿಎಂ ಅವರ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ಜಿ (Yezde) ಬೈಕ್ (ನಂಬರ್ CAE 7684) ಅನ್ನು ಮರುವಿನ್ಯಾಸ ಮಾಡಿ ಸದಾಶಿವನಗರದ ನಿವಾಸಕ್ಕೆ ತಂದು ನಿಲ್ಲಿಸಿದಾಗ ಅದನ್ನು ಕಂಡ ಶಿವಕುಮಾರ್ ಅವರು ಫುಲ್ ಖುಷಿಯಾದ್ರು. ಹಳೆಯ ದಿನಗಳ ನೆನಪಿಗೆ ಜಾರಿದ್ರು.