Published
4 months agoon
By
Akkare Newsಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಹಾನಿಯಾದ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.
ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ ಉಂಟಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.