ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ – ಯಾಂತ್ರೀಕೃತ ಭತ್ತನಾಟಿಗೆ ಚಾಲನೆ

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ 96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು 192 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಕೃಷಿಕ ಪ್ರಗತಿ ಬಂದು ಸಂಘಗಳಿಗೆ ಕೃಷಿ ಸಲಕರಣೆ, ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾದ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ವಿತರಿಸಿದರು.

 

 

ಬಳಿಕ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಗದ್ದೆಯಲ್ಲಿ ಯಾಂತ್ರಿಕೃತ ಭತ್ತ ನಾಟಿಗೆ ಚಾಲನೆ ನೀಡಿ ಮಾತನಾಡಿ, ಯೋಜನೆಯ ಯಾವುದೇ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಮತ್ತು ಸಮಾಜದ ಏಳಿಗೆಗಾಗಿ ಜನರ ಪರಿವರ್ತನೆಗಾಗಿ ರೂಪಗೊಂಡ ಕಾರ್ಯಕ್ರಮಗಳು ಮತ್ತು ಪರಿಣಾಮಕಾರಿ ಕಾರ್ಯಕ್ರಮಗಳು ಎಂದು ಹೇಳಿದರು.

ತಾಲೂಕು ತಹಶೀಲ್ದಾರ ಮತ್ತು ದಂಡಾಧಿಕಾರಿ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಎಸ್.ಆ‌ರ್, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾ‌ರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ, ಯೋಜನೆಯ ಕೇಂದ್ರ ಕಚೇರಿ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೆಜಸ್ ಉಪಸ್ಥಿತರಿದ್ದು ಶುಭ ಹಾರೈಸಿದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement