Published
4 months agoon
By
Akkare Newsಪುತ್ತೂರು:ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡಲಾಗುವ 2024-25ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯು ಪ್ರಕಟಗೊಂಡಿದ್ದುಹಿ.ಪ್ರಾ ಶಾಲೆ ವಿಭಾಗದಲ್ಲಿ ಬೆಳ್ಳಿಪ್ಪಾಡಿ ಶಾಲಾ ಮುಖ್ಯ ಶಿಕ್ಷಕಿ ಯಶೋಧ ಎನ್.ಎಂ. ಆಯ್ಕೆಯಾಗಿದ್ದಾರೆ.
ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರನ್ನು ಮಾಡಿದೆ. ಜಿಲ್ಲಾ ಆಯ್ಕೆ ಸಮಿತಿಗೆ ಸ್ವೀಕೃತಗೊಂಡಿರುವ 41 ಪ್ರಸ್ತಾವಣೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ವಸ್ತುನಿಷ್ಠ ಮಾನದಂಡದಂತೆ ಪ್ರತಿ ಸದಸ್ಯರು ಅಂಕಗಳನ್ನು ನೀಡಿ ಅದರ ಸರಾಸರಿ ಆಧಾರದಲ್ಲಿ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ
ಪ್ರಶಸ್ತಿಗಳನ್ನು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಎಂಬ ಮೂರು ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಮೂರು ವಿಭಾಗದಲ್ಲಿಯೂ ಪ್ರತಿ ತಾಲೂಕುಗಳಿಂದ ಓರ್ವ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.