ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಶಾಲೆಗೆಂದು ಪಡೆದುಕೊಂಡ ಭೂಮಿಯಲ್ಲಿ ಹೋಟೆಲ್ ನಿರ್ಮಿಸಿದ ಬಿಜೆಪಿ ಮುಖಂಡ : ಚಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ :ಕಾಂಗ್ರೆಸ್

Published

on

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಭೂ ಹಗರಣಗಳನ್ನು ಬಯಲು ಮಾಡಿ ದಾಳಿ ನಡೆಸುತ್ತಿರುವ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮೇಲೆ ಕಾಂಗ್ರೆಸ್‌ ಮುಗಿಬಿದ್ದಿದೆ. ಛಲವಾದಿ ನಾರಾಯಣ ಸ್ವಾಮಿ ಶಾಲೆಗೆಂದು ಪಡೆದುಕೊಂಡ ಸೈಟ್‌ನಲ್ಲಿ ದಮ್‌ ಬಿರಿಯಾನಿ ಹೋಟೆಲ್‌ ಪ್ರಾರರಂಭಿಸಿದ್ದಾರೆ ಎಂದು ನಿನ್ನೆ ಕಾಂಗ್ರೆಸ್‌ ನಾಯಕರು ರಾಜ್ಯಪಾಲರಿಗೆ ದೂರು ನೀಡಿ ವಿಧಾನಪರಿಷತ್‌ ಸದಸ್ಯ ಸ್ಥಾನದಿಂದ ಅವರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿದ್ದಾರೆ.

 

ವಿಧಾನ ಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ನೇತೃತ್ವದಲ್ಲಿ ಕಾಂಗ್ರೆಸ್‌‍ ನಾಯಕರು ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ಸಲ್ಲಿಸಿದರು.

2002ರ ನವೆಂಬರ್‌ 28ರಿಂದ 2004ರ ಮೇ 5ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂ ಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್‌ ಆ್ಯಂಡ್ ಎಜುಕೇಷನ್‌ ಟ್ರಸ್ಟ್‌ಗೆ ಬಳಸಿಕೊಂಡಿದ್ದಾರೆ.

 

ಛಲವಾದಿ ನಾರಾಯಣಸ್ವಾಮಿ ಹೌಸಿಂಗ್ ಬೋರ್ಡ್ ನಿರ್ದೇಶಕರಾಗಿದ್ದಾಗ ಸಿಎ ಸೈಟ್ ಪಡೆದುಕೊಂಡಿದ್ದರು. ಆಗ ಅವರು ಆದರ್ಶ ಸ್ಕೂಲ್ ಎಜುಕೇಶನ್​​ ಗ್ರೂಪ್​​ನ ಚೇರ್ಮನ್ ಆಗಿದ್ದರು. ಇದೀಗ ಸಿಎ ಸೈಟ್ ಪಡೆದ ಜಾಗದಲ್ಲಿ ಆನಂದ್ ಧಂ ಬಿರಿಯಾನಿ ಹೋಟೆಲ್‌ ನಡೆಯುತ್ತಿದೆ. ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್​ನಲ್ಲಿ ಬಿರಿಯಾನಿ ಹೋಟೆಲ್​ ನಡೆಸುತ್ತಿದ್ದಾರೆ. ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ ಎಂದು ಸಲೀಂ ಅಹ್ಮದ್‌ ಹೇಳಿದ್ದಾರೆ.

 

ಐದು ವರ್ಷದಲ್ಲಿ ಶಾಲೆಯ ಕಟ್ಟಡ ಕಟ್ಟಬೇಕು ಎಂಬ ಕಂಡೀಷನ್ ಮೇಲೆ ಹೌಸಿಂಗ್ ಬೋರ್ಡ್ ನಿವೇಶನ ನೀಡುತ್ತದೆ. ನಾರಾಯಣ ಸ್ವಾಮಿ ನಿವೇಶನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಶಾಲೆ ಕಟ್ಟುವ ಬದಲು ಟೆಲಿ ಕಮ್ಯುನಿಕೇಷನ್ ಆ್ಯಂಡ್ ಪಬ್ಲಿಕ್ ಸರ್ವೀಸ್ ಕಂಪನಿ ಹೆಸರಿಗೆ ಈ ಜಾಗವನ್ನು ಮಾರ್ಪಾಡು ಮಾಡಿದ್ದಾರೆ. ಸೇಲ್ ಡೀಡ್ ಆಗುವ ಮೊದಲೇ ಈ ರೀತಿ ಮಾರ್ಪಾಡು ಮಾಡಿದ್ದಾರೆ. ಯಾವಾಗ ಟೆಲಿ ಕಮ್ಯುನಿಕೇಷನ್​​ನಲ್ಲಿ ಛಲವಾದಿ ನಾರಾಯಣಸ್ವಾಮಿ ಎಕ್ಸ್​ಪರ್ಟ್ ಆದರೋ ಅವರೇ ಹೇಳಬೇಕು ಎಂದು ಲೇವಡಿ ಮಾಡಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement