ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ: ಸಿಎಂ ಸಿದ್ದರಾಮಯ್ಯ ಚಾಲನೆ

Published

on

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಹಲವು ವರ್ಷಗಳ ಕನಸು ಇಂದು ಗೌರಿ ಗಣೇಶ ಹಬ್ಬದಂದು ಈಡೇರಿದೆ.



ಈ ಯೋಜನೆ ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಜನರ ಬದುಕನ್ನೇ ಬದಲಾಯಿಸಲಿದೆ. ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಇಂದು ಚಾಲನೆ ದೊರೆಯಿತು.

 

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement