ಪುತ್ತೂರು: ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸೆ.7ರಿಂದ 9ರವರೆಗೆ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರಾಮ ಪಂಚಾಯತ್ ಕೈ ಜೋಡಿಸಿದೆ.
ಗಣೇಶೋತ್ಸವದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ನವರು ಸೇಡಿಯಾಪುನಿಂದ ಶಾಂತಿನಗರದವರೆಗೆ ಸೆ.7ರಂದು ಸ್ವಚ್ಛತಾ ಆಂದೋಲನ ನಡೆಸಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಮತ್ತು ಪಿಡಿಓ ವಿಲ್ಫ್ರೆಡ್ ರೋಡ್ರಿಗಸ್ ನೇತೃತ್ವದಲ್ಲಿ ಸ್ವಚ್ಛತಾ ಆಂದೋಲನ ನಡೆಸಲಾಗಿದ್ದು ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಹಲವರು ಭಾಗವಹಿಸಿದ್ದರು.