Published
4 months agoon
By
Akkare Newsನವದೆಹಲಿ: ದೇಶದಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಗಣೇಶ ಚತುರ್ಥಿ ಹಬ್ಬವು ಅಡೆತಡೆಗಳನ್ನು ನಿವಾರಿಸುವ ಗಣೇಶನ ಜನ್ಮ ದಿನವನ್ನು ಸೂಚಿಸುತ್ತದೆ. ಗಣೇಶ ಚತುರ್ಥಿ ಹಬ್ಬವನ್ನು ಭಾದ್ರಪದ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬವಾಗಿದೆ. ಈ ದಿನದಂದು ಭಕ್ತರು ತಮ್ಮ ಮನೆಗೆ ಗಣೇಶನ ವಿಗ್ರಹಗಳನ್ನು ತಂದು ನೈವೇದ್ಯ ಮತ್ತು ವಿಧಿ-ವಿಧಾನಗಳೊಂದಿಗೆ ಪೂಜೆಯನ್ನು ಮಾಡುತ್ತಾರೆ.
ಸೆಲೆಬ್ರೆಟಿಗಳು, ರಾಜಕಾರಣಿಗಳು ಸಾಮಾಜಿಕ ಜಾಲತಾಣದಲ್ಲಿ ಗಣೇಶ ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ‘ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪ ಮೋರ್ಯ’ ಎಂದು ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.